A A A A A

ರಹಸ್ಯಗಳು: [ಕ್ಯಾನ್ಸರ್]


ಕೊರಿಂಥಿಯರಿಗೆ ೨ ೪:೧೬-೧೯
[೧೬] ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.[೧೭] ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.[೧೮] ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.[೧೯] ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.

ಕೀರ್ತನೆಗಳು ೧೦೭:೨೦
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು.

ಯೆಶಾಯನ ೪೦:೩೧
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

ಧರ್ಮೋಪದೇಷಕಾಂಡ ೩೧:೬
ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

ಮತ್ತಾಯನು ೧೧:೨೮-೨೯
[೨೮] ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.[೨೯] ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.

ಕೀರ್ತನೆಗಳು ೧೮:೬
ನನ್ನ ಇಕ್ಕಟ್ಟಿನಲ್ಲಿ ಕರ್ತನನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಆತನು ತನ್ನ ಮಂದಿರದೊಳಗಿಂದ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಯು ಆತನ ಸನ್ನಿಧಿಗೂ ಆತನ ಕಿವಿಗಳಲ್ಲಿಯೂ ಮುಟ್ಟಿತು.

ಉಪದೇಷಕ ೩:೧
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.

ಯೆರೆಮೀಯನ ಗ್ರಂಥ ೨೯:೧೧
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

ಯೊವಾನ್ನನು ೧೪:೧-೪
[೧] ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.[೨] ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.[೩] ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.[೪] ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.

ರೋಮನರಿಗೆ ೮:೧೬-೨೫
[೧೬] ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.[೧೭] ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.[೧೮] ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.[೧೯] ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.[೨೦] ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.[೨೧] ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.[೨೨] ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.[೨೩] ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.[೨೪] ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?[೨೫] ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.

ಪೇತ್ರನು ೧ ೧:೩
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ

ಕೊರಿಂಥಿಯರಿಗೆ ೨ ೧:೩-೬
[೩] ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.[೪] ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.[೫] ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.[೬] ನಾವು ಸಂಕಟ ಪಟ್ಟರೆ ಅದು ನಿಮ್ಮ ಆದರಣೆಗಾಗಿಯೂ ರಕ್ಷಣೆಗಾಗಿಯೂ ಆಗಿದ್ದು ನಾವು ಅನುಭವಿಸುವ ಶ್ರಮೆಗಳಲ್ಲಿ ತಾಳ್ಮೆಯುಳ್ಳವರಾಗುವಂತೆ ಅವು ಪರಿಣಮಿಸುತ್ತವೆ; ಇಲ್ಲವೆ ನಾವು ಆದರಿಸಲ್ಪಟ್ಟರೆ ಅದು ನಿಮ್ಮ ಆದರಣೆಗಾಗಿ ಮತ್ತು ರಕ್ಷಣೆಗಾಗಿ ಇರುತ್ತದೆ.

Kannada Bible BSI 2016
Copyright © 2016 by The Bible Society of India. All rights reserved worldwide