A A A A A

ರಹಸ್ಯಗಳು: [ಡೈನೋಸಾರ್ಗಳು]


ಯೆಶಾಯನ ೨೭:೧
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.

ಆದಿಕಾಂಡ ೧:೨೧
ಇದಲ್ಲದೆ ತಮ್ಮ ಜಾತಿಯ ಪ್ರಕಾರ ನೀರುಗಳು ಸಮೃದ್ಧಿಯಾಗಿ ಬರಮಾಡಿದ ದೊಡ್ಡ ತಿಮಿಂಗಿಲಗಳನ್ನೂ ಚಲಿಸುವ ಪ್ರತಿಯೊಂದು ಜೀವ ಜಂತುಗಳನ್ನೂ ತನ್ನ ಜಾತಿಗನುಸಾರವಾದ ರೆಕ್ಕೆಗಳಿದ್ದ ಪ್ರತಿಯೊಂದು ಪಕ್ಷಿಯನ್ನೂ ದೇವರು ಸೃಷ್ಟಿಸಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

ಕೀರ್ತನೆಗಳು ೧೦೪:೨೬
ಅದರಲ್ಲಿ ಹಡಗುಗಳು ಹೋಗು ತ್ತವೆ; ಅದರಲ್ಲಿ ಆಡುವದಕ್ಕೆ ನೀನು ರೂಪಿಸಿದ ಲೆವಿ ಯಾತಾನವು ಅದೆ.

ರೋಮನರಿಗೆ ೧:೧೮
ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

ಆದಿಕಾಂಡ ೧:೨೪-೩೧
[೨೪] ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.[೨೫] ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.[೨೬] ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.[೨೭] ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.[೨೮] ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.[೨೯] ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.[೩೦] ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.[೩೧] ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಯೋಬನ ೪೦:೧೫-೨೪
[೧೫] ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.[೧೬] ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.[೧೭] ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ.[೧೮] ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ.[೧೯] ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.[೨೦] ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.[೨೧] ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.[೨೨] ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.[೨೩] ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್‌ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.[೨೪] ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.

ಯೋಬನ ೪೧:೧-೧೦
[೧] ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?[೨] ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?[೩] ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?[೪] ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?[೫] ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?[೬] ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?[೭] ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?[೮] ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.[೯] ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.[೧೦] ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?

ಯೊಹೋಶುವ ೧೦:೧-೧೦
[೧] ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ[೨] ಯೆರೂಸಲೇಮಿನ ಅರಸನಾದ ಅದೋನೀ ಚೆದೆಕನು ಕೇಳಿ ಬಹು ಭಯಪಟ್ಟರು. ಯಾಕಂದರೆ ಗಿಬ್ಯೋನ್‌ ರಾಜಪಟ್ಟಣಗಳ ಹಾಗೆ ದೊಡ್ಡ ಪಟ್ಟಣ ವಾಗಿತ್ತು; ಮತ್ತು ಆಯಿಗಿಂತಲೂ ದೊಡ್ಡದಾಗಿತ್ತು; ಇದಲ್ಲದೆ ಅದರ ಮನುಷ್ಯರು ಪರಾಕ್ರಮಶಾಲಿಗಳಾ ಗಿದ್ದರು.[೩] ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--[೪] ಗಿಬ್ಯೋನು ಯೆಹೋಶುವನ ಸಂಗಡವೂ ಇಸ್ರಾಯೇಲ್‌ ಮಕ್ಕಳ ಸಂಗಡವೂ ಸಮಾಧಾನಮಾಡಿಕೊಂಡದ್ದರಿಂದ ನಾವು ಅದನ್ನು ಹೊಡೆಯುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ ಅಂದನು.[೫] ಹಾಗೆಯೇ ಅಮೋರಿ ಯರ ಅರಸುಗಳಾದ ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಈ ಐದು ಮಂದಿ ಅರಸುಗಳು ಕೂಡಿಕೊಂಡು ಅವರೂ ಅವರ ಸೈನ್ಯವೂ ಹೊರಟುಹೋಗಿ ಗಿಬ್ಬೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿ ದರು.[೬] ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.[೭] ಆಗ ಯೆಹೋಶುವನು ಗಿಲ್ಗಾಲನ್ನು ಬಿಟ್ಟು ತಾನೂ ತನ್ನ ಸಂಗಡ ಸಮಸ್ತಯುದ್ಧದ ಜನರೂ ಸಮಸ್ತ ಪರಾಕ್ರಮಶಾಲಿಗಳೂ ಏರಿಹೋದರು.[೮] ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.[೯] ಆದದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಅವರ ಮೇಲೆ ತಕ್ಷಣವೇ ಬಂದನು.[೧೦] ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್‌ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.

Kannada Bible BSI 2016
Copyright © 2016 by The Bible Society of India. All rights reserved worldwide