A A A A A

ಪಾಪಗಳು: [ಮಗುವನ್ನು ಗರ್ಭಪಾತ]


ಕೊರಿಂಥಿಯರಿಗೆ ೧ ೧:೨೭
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

ಧರ್ಮೋಪದೇಷಕಾಂಡ ೨೪:೧೬
ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.

ಧರ್ಮೋಪದೇಷಕಾಂಡ ೩೦:೧೯
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.

ಗಲಾತ್ಯರಿಗೆ ೧:೧೫
ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ದೇವರು ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ನನ್ನನ್ನು ಕರೆದನು;

ಯೆಶಾಯನ ೪೩:೨೫
ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

ಯೆಶಾಯನ 44:24
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.

ಎಫೆಸಿಯರಿಗೆ ೧:೭
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.

ವಿಮೋಚನಾಕಾಂಡ ೪:೧೧
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

ಯೆಶಾಯನ ೬೪:೮
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

ಯೆರೆಮೀಯನ ಗ್ರಂಥ ೧:೫
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.

ಕೀರ್ತನೆಗಳು ೧೦೦:೩
ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.

ಕೀರ್ತನೆಗಳು ೧೨೭:೩
ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಲೂಕನು ೨:೬-೭
[೬] ಹೀಗೆ ಅವರು ಅಲ್ಲಿ ಇದ್ದಾಗ ಆಕೆಗೆ ಹೆರಿಗೆಯ ದಿವಸಗಳು ಪೂರ್ಣವಾದವು.[೭] ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಗಳಿಂದ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಆತನನ್ನು ಗೋದ ಲಿಯಲ್ಲಿ ಮಲಗಿಸಿದಳು.

ಎಫೆಸಿಯರಿಗೆ ೧:೩-೪
[೩] ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.[೪] ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.

ಕೊರಿಂಥಿಯರಿಗೆ ೧ ೬:೧೯-೨೦
[೧೯] ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.[೨೦] ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.

ಯೆಶಾಯನ ೪೫:೯-೧೧
[೯] ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?[೧೦] ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.[೧೧] ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?

ವಿಮೋಚನಾಕಾಂಡ ೨೧:೨೨-೨೫
[೨೨] ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿ ಯಾದ ಸ್ತ್ರೀಗೆ ಏಟು ತಗಲಿದದರಿಂದ ಅವಳಿಗೆ ಗರ್ಭ ಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಸ್ತ್ರೀಯ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡು ತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.[೨೩] ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ[೨೪] ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ[೨೫] ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಕೀರ್ತನೆಗಳು ೧೩೯:೧೩-೧೬
[೧೩] ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.[೧೪] ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;[೧೫] ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.[೧೬] ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.

ಲೂಕನು ೧:೪೧-೪೪
[೪೧] ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ[೪೨] ಗಟ್ಟಿಯಾದ ಧ್ವನಿಯಿಂದ ಮಾತ ನಾಡಿ--ಸ್ತ್ರೀಯರಲ್ಲಿ ನೀನು ಧನ್ಯಳೇ; ನಿನ್ನ ಗರ್ಭಫಲವು ಆಶೀರ್ವದಿಸಲ್ಪಟ್ಟದ್ದೇ.[೪೩] ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?[೪೪] ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.

ವಿಮೋಚನಾಕಾಂಡ ೨೦:೧-೧೩
[೧] ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದನು. ಅವು ಯಾವವಂದರೆ--[೨] ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.[೩] ನನ್ನ ಮುಂದೆ ನಿನಗೆ ಬೇರೆ ದೇವರುಗಳು ಇರಬಾರದು.[೪] ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.[೫] ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.[೬] ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.[೭] ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.[೮] ಸಬ್ಬತ್‌ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.[೯] ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.[೧೦] ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್‌ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.[೧೧] ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.[೧೨] ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.[೧೩] ಕೊಲೆ ಮಾಡಬಾರದು.

Kannada Bible BSI 2016
Copyright © 2016 by The Bible Society of India. All rights reserved worldwide