A A A A A

ಪಾಪಗಳು: [ಧರ್ಮಭ್ರಷ್ಟತೆ]


ಥೆಸೆಲೋನಿಯರಿಗೆ ೨ ೨:೩
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;

ದಾನಿಯೇಲನ ೯:೨೭
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.

ತಿಮೊಥೇಯನಿಗ ೧ ೪:೧
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.

ಹಿಬ್ರಿಯರಿಗೆ ೩:೧೨
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಲೂಕನು ೮:೧೩
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.

ಹಿಬ್ರಿಯರಿಗೆ ೬:೪-೬
[೪] ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ[೫] ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ[೬] ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

ಪೇತ್ರನು ೨ ೨:೨೦-೨೨
[೨೦] ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.[೨೧] ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.[೨೨] ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.

ಹಿಬ್ರಿಯರಿಗೆ ೧೦:೨೬-೨೯
[೨೬] ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.[೨೭] ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.[೨೮] ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.[೨೯] ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

ತಿಮೊಥೇಯನಿಗ ೨ ೪:೩-೪
[೩] ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.[೪] ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.

ಯೊವಾನ್ನನು 15:6
ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.

ತಿಮೊಥೇಯನಿಗ ೧ 4:1-2
[1] ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.[2] ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ಪೇತ್ರನು ೨ 2:1
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ

ಮತ್ತಾಯನು 24:10-12
[10] ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.[11] ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು.[12] ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು.

ಪೇತ್ರನು ೨ 3:17
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ದುಷ್ಟರ ತಪ್ಪಿನಂತೆ ನಡಿಸ ಲ್ಪಟ್ಟು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಠರಾಗದಂತೆ ಎಚ್ಚರಿಕೆಯಾಗಿರ್ರಿ.ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್‌.

ಯೊವಾನ್ನನು ೬:೬೬
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.

ಪೇತ್ರನು ೨ ೨:೧೭
ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.

ತಿಮೊಥೇಯನಿಗ ೧ ೪:೧-೩
[೧] ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.[೨] ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು[೩] ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವದಕ್ಕೋಸ್ಕರ ದೇವರು ಉಂಟು ಮಾಡಿದ ಆಹಾರವನ್ನು ತಿನ್ನಬಾರ ದೆಂತಲೂ ಆಜ್ಞಾಪಿಸುತ್ತಾರೆ.

ಕೊರಿಂಥಿಯರಿಗೆ ೧ ೧೦:೧೨
ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.

ಮತ್ತಾಯನು ೨೪:೯-೧೦
[೯] ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು.[೧೦] ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.

ಮತ್ತಾಯನು ೨೬:೧೪-೧೬
[೧೪] ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--[೧೫] ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.[೧೬] ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.

ತಿಮೊಥೇಯನಿಗ ೧ ೧:೧೯-೨೦
[೧೯] ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.[೨೦] ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.

ಯೊವಾನ್ನನು ೧ ೨:೧೯
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.

ಹಿಬ್ರಿಯರಿಗೆ ೧೦:೨೫-೩೧
[೨೫] ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.[೨೬] ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.[೨೭] ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.[೨೮] ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.[೨೯] ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.[೩೦] ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.[೩೧] ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.

ಯೆರೆಮೀಯನ ಗ್ರಂಥ ೧೭:೫-೬
[೫] ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--[೬] ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.

ಯೆಜೆಕಿಯೇಲನ ೩:೨೦
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;

ಯೆಜೆಕಿಯೇಲನ ೧೮:೨೪
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.

ಮತ್ತಾಯನು ೧೩:೨೦-೨೧
[೨೦] ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;[೨೧] ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

ಕೊರಿಂಥಿಯರಿಗೆ ೧ ೯:೨೭
ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.

ಹಿಬ್ರಿಯರಿಗೆ ೬:೪-೮
[೪] ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ[೫] ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ[೬] ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.[೭] ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;[೮] ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

ಪ್ರೇಷಿತರ ೨೧:೨೧
ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.

ಗಲಾತ್ಯರಿಗೆ ೫:೪
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.

ಕೊರಿಂಥಿಯರಿಗೆ ೧ ೬:೯
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

ಹಿಬ್ರಿಯರಿಗೆ ೧೦:೨೬
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಮತ್ತಾಯನು ೧೩:೪೧
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು;

ತಿಮೊಥೇಯನಿಗ ೨ ೪:೩
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.

ಥೆಸೆಲೋನಿಯರಿಗೆ ೨ ೨:೩-೪
[೩] ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;[೪] ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.

ಯೊವಾನ್ನನು ೧:೧೪
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

ಧರ್ಮೋಪದೇಷಕಾಂಡ ೧೩:೧೩
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ

ತಿಮೊಥೇಯನಿಗ ೧ ೪:೧೦
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.

ಪೇತ್ರನು ೧ ೩:೧೭
ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.

ಥೆಸೆಲೋನಿಯರಿಗೆ ೧ ೨:೩
ಯಾಕಂದರೆ ನಮ್ಮ ಬೋಧನೆಯು ಮೋಸ ವಲ್ಲ, ಅಶುದ್ಧವಲ್ಲ, ವಂಚನೆಯಲ್ಲ;

ಧರ್ಮೋಪದೇಷಕಾಂಡ ೩೨:೧೫
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.

ಯೆಜೆಕಿಯೇಲನ ೧೮:೨೬
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.

ತಿಮೊಥೇಯನಿಗ ೧ ೪:೨
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು

ಮಾರ್ಕನು ೧೦:೧೧
ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ.

ಲೂಕನು ೨೨:೩-೬
[೩] ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.[೪] ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು.[೫] ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.[೬] ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.

ಮತ್ತಾಯನು ೧೨:೩೧-೩೨
[೩೧] ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.[೩೨] ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.

Kannada Bible BSI 2016
Copyright © 2016 by The Bible Society of India. All rights reserved worldwide