|
ಲೂಕನು ೬:೩೮ |
ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು. |
|
ಮತ್ತಾಯನು ೫:೪ |
ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು. |
|
ಫಿಲಿಪಿಯರಿಗೆ ೪:೧೯ |
ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು. |
|
ಕೀರ್ತನೆಗಳು ೬೭:೭ |
ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II |
|
ಸಂಖ್ಯಾಕಾಂಡ ೬:೨೪-೨೫ |
[೨೪] ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ![೨೫] ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ! |
|
ಫಿಲಿಪಿಯರಿಗೆ ೪:೬-೭ |
[೬] ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.[೭] ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು. |
|
ಯಕೋಬನು ೧:೧೭ |
ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ. |
|
ಯೆರೆಮೀಯನ ಗ್ರಂಥ ೧೭:೭-೮ |
[೭] ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.[೮] ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ. |
|
ಯೆಶಾಯನ ೪೧:೧೦ |
ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ. |
|
ಯೊವಾನ್ನನು ೧:೧೬ |
ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ. |
|
ಆದಿಕಾಂಡ ೨೨:೧೬-೧೭ |
[೧೬] “ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;[೧೭] ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು. |
|
ಆದಿಕಾಂಡ ೨೭:೨೮-೨೯ |
[೨೮] ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.[೨೯] ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!” |
|
ಕೀರ್ತನೆಗಳು ೧:೧-೩ |
[೧] ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II[೨] ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II[೩] ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II |
|
ಕೀರ್ತನೆಗಳು ೨೩:೧-೪ |
[೧] ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II[೨] ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II[೩] ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II[೪] ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II |
|
ಸಮುವೇಲನು ೨ ೨೨:೩-೪ |
[೩] ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.[೪] ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು |
|
ಯೊವಾನ್ನನು ೧ ೫:೧೮ |
ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು. |
|
ಕೀರ್ತನೆಗಳು ೧೩೮:೭ |
ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II |
|
ಕೊರಿಂಥಿಯರಿಗೆ ೨ ೯:೮ |
ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ. |
|
ಫಿಲಿಪಿಯರಿಗೆ ೪:೭ |
ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು. |
|
Kannada Bible (KNCL) 2016 |
No Data |