A A A A A

ಹೆಚ್ಚುವರಿ: [ಆಲ್ಕೋಹಾಲ್]


ಪೇತ್ರನು ೧ 4:3
ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.

ತಿಮೊಥೇಯನಿಗ ೧ 5:23
ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.

ಉಪದೇಷಕ 9:7
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.

ಎಫೆಸಿಯರಿಗೆ 5:18
ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.

ಜ್ಞಾನೋಕ್ತಿಗಳು 20:1
ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.

ಜ್ಞಾನೋಕ್ತಿಗಳು 23:31
ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.

ರೋಮನರಿಗೆ 13:13
ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.

ಜ್ಞಾನೋಕ್ತಿಗಳು 31:4-5
[4] ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.[5] ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.

ಕೀರ್ತನೆಗಳು 104:14-15
[14] ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II[15] ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II

ಕೊರಿಂಥಿಯರಿಗೆ ೧ 10:23-24
[23] “ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.[24] ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು.

ಯೆಶಾಯನ 62:8-9
[8] ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ: “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.[9] ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”

ಗಲಾತ್ಯರಿಗೆ 5:19-21
[19] ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,[20] ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.[21] ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.

ಕೊರಿಂಥಿಯರಿಗೆ ೧ 9:19-23
[19] ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.[20] ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.[21] ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.[22] ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.[23] ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,

ರೋಮನರಿಗೆ 14:15-21
[15] ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.[16] ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ.[17] ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.[18] ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.[19] ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.[20] ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.[21] ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.

ಯೊವಾನ್ನನು 2:3-11
[3] ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.[4] ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.[5] ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.[6] ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.[7] ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.[8] ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.[9] ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.[10] ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.[11] ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.

Kannada Bible (KNCL) 2016
No Data