A A A A A

ಚರ್ಚ್: [ಚರ್ಚ್‌ಗೆ ಹಾಜರಾಗುವುದು]


ಹಿಬ್ರಿಯರಿಗೆ ೧೦:೨೪-೨೫
[೨೪] ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.[೨೫] ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.

ಮತ್ತಾಯನು ೧೮:೨೦
ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”

ಕೊಲೊಸ್ಸೆಯರಿಗೆ ೩:೧೬
ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.

ಎಫೆಸಿಯರಿಗೆ ೪:೧೧-೧೩
[೧೧] ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.[೧೨] ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.[೧೩] ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.

ಪ್ರೇಷಿತರ 2:42
ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.

ರೋಮನರಿಗೆ 10:17
ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.

ಮತ್ತಾಯನು 16:18
ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.

ಪ್ರೇಷಿತರ 9:31-32
[31] ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.[32] ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.

ಮತ್ತಾಯನು 6:33
ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.

ಯಕೋಬನು 1:22
ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.

ತಿಮೊಥೇಯನಿಗ ೨ 4:2
ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.

ಮತ್ತಾಯನು 28:19-20
[19] ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.[20] ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು

Kannada Bible (KNCL) 2016
No Data