ಮತ್ತಾಯನು 11:27-30 |
[27] “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.[28] “ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.[29] ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.[30] ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು. |
|
ಯೊವಾನ್ನನು 6:63-65 |
[63] ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.[64] ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)[65] “ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು. |
|
ಮತ್ತಾಯನು 11:28 |
“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ. |
|
ಯೆಶಾಯನ 1:18 |
ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು. |
|
ಯೆಶಾಯನ ೫೫:೧-೩ |
[೧] ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.[೨] ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.[೩] ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ. |
|
ಮತ್ತಾಯನು 15:7-9 |
[7] ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -[8] ‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ[9] ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.” |
|
ಮಾರ್ಕನು 10:13-16 |
[13] ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು.[14] ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.[15] ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.[16] ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು. |
|
ಯಕೋಬನು 4:6-8 |
[6] ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.[7] ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.[8] ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ. |
|
ಕೊರಿಂಥಿಯರಿಗೆ ೨ 5:17 |
ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ. |
|
ಯೊವಾನ್ನನು 5:24 |
“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ. |
|
ರೋಮನರಿಗೆ 12:1-2 |
[1] ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.[2] ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ. |
|
ಹಿಬ್ರಿಯರಿಗೆ 12:1 |
ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು ಸ್ಥಿರಚಿತ್ತದಿಂದ ಭಾಗವಹಿಸೋಣ. |
|
ಯಾಜಕಕಾಂಡ ೨೫:೪೪ |
ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು; |
|
ಕೀರ್ತನೆಗಳು 32:8-10 |
[8] ಪ್ರಭು ಇಂತೆಂದನು: “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II[9] ‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II[10] ‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II |
|
ಯೆಶಾಯನ ೨೯:೧೩ |
ಸರ್ವೇಶ್ವರ ಹೀಗೆಂದರು: “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ. |
|
ಯೊವಾನ್ನನು ೫:೪೦ |
ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ. |
|
ಯೊವಾನ್ನನು ೬:೪೪-೪೫ |
[೪೪] ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.[೪೫] ‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ. |
|
ಯೊವಾನ್ನನು ೭:೩೭-೩೯ |
[೩೭] ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.[೩೮] ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.[೩೯] ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ. |
|
ಹಿಬ್ರಿಯರಿಗೆ ೪:೧೪-೧೬ |
[೧೪] ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.[೧೫] ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.[೧೬] ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ. |
|
ಪ್ರಕಟನೆ ೨೨:೧೬-೧೭ |
[೧೬] “ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ![೧೭] ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.” |
|
ಯೊವಾನ್ನನು ೬:೩೭ |
ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ. |
|
ಪ್ರಕಟನೆ ೨೨:೧೭ |
ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.” |
|
ಯೆಶಾಯನ ೧೩:೬-೮ |
[೬] ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ![೭] ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.[೮] ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ. |
|
ಪ್ರಕಟನೆ ೧೨:೯ |
ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು. |
|
ಫಿಲಿಪಿಯರಿಗೆ 1:6 |
ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ. |
|
ಪ್ರಕಟನೆ ೨೧:೪ |
ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.” |
|
ಹಿಬ್ರಿಯರಿಗೆ 10:19-22 |
[19] ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.[20] ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.[21] ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ.[22] ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ. |
|
ಯೊವೇಲನ ೨:೩೨ |
ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.” |
|
ಕೀರ್ತನೆಗಳು ೧೦೪:೯ |
ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II |
|
ಆದಿಕಾಂಡ ೬:೧೨ |
ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು. |
|
ಆದಿಕಾಂಡ ೮:೯ |
ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು. |
|
ಆದಿಕಾಂಡ ೯:೧೧ |
ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.” |
|
ಆದಿಕಾಂಡ ೭:೨೦ |
ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು. |
|
ಆದಿಕಾಂಡ ೮:೫ |
ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು. |
|
ಜ್ಞಾನೋಕ್ತಿಗಳು ೩೧:೩೦ |
ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು. |
|
Kannada Bible (KNCL) 2016 |
No Data |