A A A A A

ದೇವರು: [ಅನುಶಾಸನಗಳು]


ಮಾರ್ಕನು 10:19
ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.

ಲೂಕನು 18:20
ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.

ಮತ್ತಾಯನು ೨೨:೩೪-೪೦
[೩೪] ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.[೩೫] ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:[೩೬] “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”[೩೭] ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’[೩೮] ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ.[೩೯] ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’[೪೦] ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

ರೋಮನರಿಗೆ ೧೩:೯
“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.

ಮತ್ತಾಯನು ೧೯:೧೬-೧೯
[೧೬] ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.[೧೭] ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.[೧೮] “ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು[೧೯] ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.

ಮತ್ತಾಯನು ೨೨:೩೬-೪೦
[೩೬] “ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”[೩೭] ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’[೩೮] ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ.[೩೯] ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’[೪೦] ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.

ಮತ್ತಾಯನು ೧೦:೧೭-೨೨
[೧೭] ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.[೧೮] ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.[೧೯] ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.[೨೦] ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.[೨೧] ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.[೨೨] ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.

ರೋಮನರಿಗೆ ೧೩:೮-೧೪
[೮] ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.[೯] “ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.[೧೦] ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.[೧೧] ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.[೧೨] ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.[೧೩] ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.[೧೪] ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.

ಮಾರ್ಕನು 12:28-34
[28] ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.[29] ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;[30] ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.[31] “ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.[32] ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;[33] ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.[34] ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

ವಿಮೋಚನಾಕಾಂಡ ೩೪:೨೮
ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.

ಧರ್ಮೋಪದೇಷಕಾಂಡ ೪:೧೩
ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.

ಧರ್ಮೋಪದೇಷಕಾಂಡ ೧೦:೪
ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.

ಧರ್ಮೋಪದೇಷಕಾಂಡ ೫:೭-೨೨
[೭] ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.[೮] ‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.[೯] ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.[೧೦] ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.[೧೧] ‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೧೨] ‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.[೧೩] ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.[೧೪] ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.[೧೫] ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.[೧೬] ‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.[೧೭] ‘ಕೊಲೆ ಮಾಡಬೇಡ;[೧೮] ‘ವ್ಯಭಿಚಾರ ಮಾಡಬೇಡ;[೧೯] ‘ಕದಿಯಬೇಡ;[೨೦] ‘ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ;[೨೧] ‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.[೨೨] “ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.

ಧರ್ಮೋಪದೇಷಕಾಂಡ ೬:೨೧
ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;

ಧರ್ಮೋಪದೇಷಕಾಂಡ ೧೦:೧-೫
[೧] “ಆ ಕಾಲದಲ್ಲಿ ಸರ್ವೇಶ್ವರ ನನಗೆ, ‘ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.[೨] ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.[೩] ಆದಕಾರಣ, ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ, ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು, ಬೆಟ್ಟವನ್ನು ಹತ್ತಿದೆ.[೪] ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.[೫] ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.

ವಿಮೋಚನಾಕಾಂಡ ೨೦:೧-೧೭
[೧] ದೇವರು ಕೊಟ್ಟ ಆಜ್ಞೆಗಳು ಇವು:[೨] “ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.[೩] ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.[೪] ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.[೫] ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.[೬] ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.[೭] ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೮] ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.[೯] ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.[೧೦] ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.[೧೧] ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.[೧೨] ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.[೧೩] ಕೊಲೆಮಾಡಬೇಡ.[೧೪] ವ್ಯಭಿಚಾರಮಾಡಬೇಡ.[೧೫] ಕದಿಯಬೇಡ.[೧೬] ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.[೧೭] ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.

ವಿಮೋಚನಾಕಾಂಡ ೨೪:೧೨
ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.

ವಿಮೋಚನಾಕಾಂಡ ೩೪:೧೦-೨೯
[೧೦] ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.[೧೧] ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.[೧೨] ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.[೧೩] ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.[೧೪] ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.[೧೫] ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.[೧೬] ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.[೧೭] “ನಿಮಗಾಗಿ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ.[೧೮] “ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.[೧೯] “ಪ್ರಥಮ ಗರ್ಭಫಲವೆಲ್ಲಾ, ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.[೨೦] ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”[೨೧] “ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.[೨೨] “ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.[೨೩] ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.[೨೪] ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.[೨೫] ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.[೨೬] “ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”[೨೭] ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.[೨೮] ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.[೨೯] ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.

ಧರ್ಮೋಪದೇಷಕಾಂಡ ೬:೪-೯
[೪] “ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.[೫] ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.[೬] ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.[೭] ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.[೮] ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.[೯] ನಿನ್ನ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲೂ ತಲೆಬಾಗಿಲಿನ ಮೇಲೂ ಅವುಗಳನ್ನು ಬರೆ.

ವಿಮೋಚನಾಕಾಂಡ ೨೦:೨-೧೭
[೨] “ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.[೩] ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.[೪] ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.[೫] ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.[೬] ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.[೭] ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೮] ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.[೯] ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.[೧೦] ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.[೧೧] ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.[೧೨] ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.[೧೩] ಕೊಲೆಮಾಡಬೇಡ.[೧೪] ವ್ಯಭಿಚಾರಮಾಡಬೇಡ.[೧೫] ಕದಿಯಬೇಡ.[೧೬] ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.[೧೭] ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.

ವಿಮೋಚನಾಕಾಂಡ ೩೧:೧೮
ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.

ಯೊವಾನ್ನನು 14:15
ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.

ಮತ್ತಾಯನು ೧೯:೧೮
“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು

ಯೊವಾನ್ನನು 15:10
ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಮತ್ತಾಯನು 5:17
“ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ.

ವಿಮೋಚನಾಕಾಂಡ ೩೨:೧೫
ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.

ಯೊವಾನ್ನನು 15:12-17
[12] ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.[13] ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.[14] ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.[15] ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.[16] ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.[17] ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.

ವಿಮೋಚನಾಕಾಂಡ ३२:१६
ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದಿದ್ದು ದೇವರು ಕೆತ್ತಿದ ಅಕ್ಷರಗಳೇ ಆಗಿದ್ದವು.

ವಿಮೋಚನಾಕಾಂಡ ೩೪:೨೭
ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.

Dutch Bible 2007
Copyright © 1979, 1988, 2007 by Biblica, Inc.®