A A A A A

ಒಳ್ಳೆಯ ಅಕ್ಷರ: [ಇಂದ್ರಿಯನಿಗ್ರಹ]


ಕೊರಿಂಥಿಯರಿಗೆ ೨ 12:21
ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.

ತಿಮೊಥೇಯನಿಗ ೨ 2:22
ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.

ಪ್ರೇಷಿತರ 15:20
ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.

ಕೊಲೊಸ್ಸೆಯರಿಗೆ 3:5
ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.

ಎಫೆಸಿಯರಿಗೆ 5:3
ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.

ಗಲಾತ್ಯರಿಗೆ 5:19
ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,

ಕೊರಿಂಥಿಯರಿಗೆ ೧ 6:18-19
[18] ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.[19] ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.

ಕೊರಿಂಥಿಯರಿಗೆ ೧ ೭:೨
ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.

ಕೊರಿಂಥಿಯರಿಗೆ ೧ ೧೦:೧೩
ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.

ಪೇತ್ರನು ೧ ೨:೧೧
ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಹಿಬ್ರಿಯರಿಗೆ 13:4
ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.

ಯೂದನು ೧:೭
ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.

ಮತ್ತಾಯನು 5:8
ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.

ಜ್ಞಾನೋಕ್ತಿಗಳು ೩೧:೩೦
ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.

ರೋಮನರಿಗೆ 12:1
ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.

ರೋಮನರಿಗೆ 13:13
ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.

ಥೆಸೆಲೋನಿಯರಿಗೆ ೧ 4:3-4
[3] ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.[4] ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು.

ಗಲಾತ್ಯರಿಗೆ 5:19-21
[19] ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,[20] ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.[21] ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.

ಆದಿಕಾಂಡ ೩೯:೭-೧೦
[೭] ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. \ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.[೮] ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.[೯] ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.[೧೦] ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.

Kannada Bible (KNCL) 2016
No Data