A A A A A

ಒಳ್ಳೆಯ ಅಕ್ಷರ: [ಆರೈಕೆ]


ತಿಮೊಥೇಯನಿಗ ೧ ೫:೪
ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.

ಕೀರ್ತನೆಗಳು ೧೪೬:೯
ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II

ಯೊವಾನ್ನನು ೮:೩೨
ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.

ಪ್ರಕಟನೆ ೧೭:೫
ಅವಳ ಹಣೆಯ ಮೇಲೆ: ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.

ಯಕೋಬನು ೧:೨೭
ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.

ಯೊವಾನ್ನನು ೬:೫೪
ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.

ಮಾರ್ಕನು ೬:೩
ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.

ಯೊವಾನ್ನನು ೧೪:೬
ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.

ಆದಿಕಾಂಡ ೧:೧-೭
[೧] ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.[೨] ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.[೩] ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.[೪] ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.[೫] ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.[೬] ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.[೭] ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.

ತಿಮೊಥೇಯನಿಗ ೧ ೫:೮
ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.

ಗಲಾತ್ಯರಿಗೆ ೧:೧೯
ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.

ಮಲಾಕಿಯನ ೧:೧೧
“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.

ಆದಿಕಾಂಡ ೨:೭
ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.

ಯೊವಾನ್ನನು ೩:೩-೫
[೩] ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.[೪] ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.[೫] ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.

ಹಿಬ್ರಿಯರಿಗೆ ೧೨:೧೪
ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.

ಪ್ರಕಟನೆ ೧೭:೧೮
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”

ಮತ್ತಾಯನು ೧೬:೧೮
ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.

ಆದಿಕಾಂಡ ೧:೧
ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.

ವಿಮೋಚನಾಕಾಂಡ ೧೫:೩
ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.

ಪ್ರಕಟನೆ ೧೭:೯
“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.

ಫಿಲಿಪಿಯರಿಗೆ ೪:೬-೭
[೬] ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.[೭] ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.

ಗಲಾತ್ಯರಿಗೆ ೪:೧೯
ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.

ಪೇತ್ರನು ೧ ೩:೧೫
ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.

ಪ್ರಕಟನೆ ೧೭:೧
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;

ಮತ್ತಾಯನು ೧೮:೧೫-೧೮
[೧೫] “ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.[೧೬] ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.[೧೭] ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.[೧೮] “ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.

ಎಫೆಸಿಯರಿಗೆ ೧:೨೨-೨೩
[೨೨] ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.[೨೩] ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.

ಎಫೆಸಿಯರಿಗೆ ೫:೨೩
ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.

ಪ್ರೇಷಿತರ 4:32
ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.

ಕೊರಿಂಥಿಯರಿಗೆ ೧ ൧:൧൦
ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.

ಯೊವಾನ್ನನು ೧೨:೪೮
ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.

ಯೊವಾನ್ನನು ೧೪:೨೮
ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.

ಹಿಬ್ರಿಯರಿಗೆ 1:14
ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?

ಮತ್ತಾಯನು 18:10
“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.

ಎಫೆಸಿಯರಿಗೆ ೬:೧೨
ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.

ಯೊವಾನ್ನನು ೩:೧೬
ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.

ಯೊವಾನ್ನನು ೧೭:೧೭
ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.

ಪ್ರಕಟನೆ 2:9
ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.

ಕೀರ್ತನೆಗಳು ೬೮:೫
ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II

ಕೀರ್ತನೆಗಳು ೧೪೬:೯
ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II

ಗಲಾತ್ಯರಿಗೆ ೨:೧೦
ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.

ರೋಮನರಿಗೆ ೩:೨೩
ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.

Kannada Bible (KNCL) 2016
No Data