A A A A A

ಜೀವನ: [ಪ್ರಾಣಿಗಳು]


ಆದಿಕಾಂಡ ೧:೨೧
ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.

ಆದಿಕಾಂಡ ೧:೩೦
ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.

ಯಕೋಬನು ೩:೭
ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.

ಯೆರೆಮೀಯನ ಗ್ರಂಥ ೮:೭
ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.

ಯೋಬನ ೩೫:೧೧
ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.

ಲೂಕನು ೩:೬
ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”

ಲೂಕನು ೧೨:೨೪
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!

ಮತ್ತಾಯನು ೬:೨೬
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?

ಜ್ಞಾನೋಕ್ತಿಗಳು ೧೨:೧೦
ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.

ಕೀರ್ತನೆಗಳು ೧೦೪:೨೧
ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II

ಆದಿಕಾಂಡ ೨:೧೯-೨೦
[೧೯] ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.[೨೦] ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.

ಆದಿಕಾಂಡ ೯:೨-೩
[೨] ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.[೩] ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಆದಿಕಾಂಡ ೧:೨೪-೨೮
[೨೪] ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.[೨೫] ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.[೨೬] ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:[೨೭] ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.[೨೮] ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.

ಜ್ಞಾನೋಕ್ತಿಗಳು ೬:೬-೮
[೬] ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.[೭] ಅದಕ್ಕಿಲ್ಲ ನೋಡು ನಾಯಕ, ಅರಸ ಅಧಿಪತಿ.[೮] ಆದರೂ ಕೂಡಿಸುತ್ತದೆ ತಿಂಡಿ ಬೇಸಿಗೆಯಲ್ಲಿ, ಸಂಗ್ರಹಿಸುತ್ತದೆ ಧಾನ್ಯ ಸುಗ್ಗಿಯಲ್ಲಿ.

ಕೀರ್ತನೆಗಳು ೮:೬-೯
[೬] ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II[೭] ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II[೮] ***[೯] ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II

ಯೋಬನ ೧೨:೭-೧೦
[೭] ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.[೮] ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು.[೯] ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?[೧೦] ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.

ಯೆಶಾಯನ ೧೧:೬-೯
[೬] ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.[೭] ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ.[೮] ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.[೯] ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.

ಉಪದೇಷಕ ೩:೧೮-೨೧
[೧೮] ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.[೧೯] ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.[೨೦] ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.[೨೧] ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”

ಕೀರ್ತನೆಗಳು ೧೪೮:೭-೧೨
[೭] ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II[೮] ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II[೯] ಎಲ್ಲಾ ಬೆಟ್ಟಗಳೂ ಗುಡ್ಡಗಳೂ I ಫಲವೃಕ್ಷಗಳೂ ದೇವದಾರುಗಳೂ II[೧೦] ಕಾಡುಮೃಗಗಳು, ಸಾಕುಪ್ರಾಣಿಗಳು I ಕ್ರಿಮಿಕೀಟಗಳು, ಪ್ರಾಣಿಪಕ್ಷಿಗಳು II[೧೧] ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II[೧೨] ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II

Kannada Bible (KNCL) 2016
No Data