A A A A A

ಜೀವನ: [ಮಗುವನ್ನು ದತ್ತು ತೆಗೆದುಕೊಳ್ಳುವುದು]


ಸಮುವೇಲನು ೧ ೧:೨೭
ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.

ಕೊರಿಂಥಿಯರಿಗೆ ೨ ೬:೧೮
ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.

ಧರ್ಮೋಪದೇಷಕಾಂಡ ೧೦:೧೮
ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.

ಹೊಶೇಯನ ೧೪:೩
ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.

ಯೆಶಾಯನ ೪೦:೩೧
ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.

ಯಕೋಬನು ೧:೨೭
ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.

ಯೆರೆಮೀಯನ ಗ್ರಂಥ ೨೯:೧೧
ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.

ಮತ್ತಾಯನು ೨೫:೪೦
ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.

ಜ್ಞಾನೋಕ್ತಿಗಳು ೧೩:೧೨
ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.

ಕೀರ್ತನೆಗಳು ೮೨:೩
ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II

ಕೀರ್ತನೆಗಳು ೧೪೬:೯
ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II

ಕೀರ್ತನೆಗಳು ೬೮:೫-೬
[೫] ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II[೬] ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II

ಜ್ಞಾನೋಕ್ತಿಗಳು ೩೧:೮-೯
[೮] ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.[೯] ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.

ಯೊವಾನ್ನನು ೧:೧೨-೧೩
[೧೨] ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.[೧೩] ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.

ಗಲಾತ್ಯರಿಗೆ ೪:೪-೫
[೪] ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.[೫] ***

ರೋಮನರಿಗೆ ೮:೧೪-೧೭
[೧೪] ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.[೧೫] ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.[೧೬] ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.[೧೭] ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.

ಕೀರ್ತನೆಗಳು ೧೦:೧೪-೧೮
[೧೪] ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II[೧೫] ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II[೧೬] ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II[೧೭] ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II[೧೮] ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II

Kannada Bible (KNCL) 2016
No Data