A A A A A

ಜೀವನ: [ಜನ್ಮದಿನ]


ಎಫೆಸಿಯರಿಗೆ ೨:೧೦
ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.

ಯೆರೆಮೀಯನ ಗ್ರಂಥ ೨೯:೧೧
ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.

ಯೊವಾನ್ನನು ೧೬:೨೧
ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;

ಜ್ಞಾನೋಕ್ತಿಗಳು ೯:೧೧
ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.

ಕೀರ್ತನೆಗಳು ೧೬:೧೧
ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II

ಕೀರ್ತನೆಗಳು ೨೦:೪
ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II

ಕೀರ್ತನೆಗಳು ๒๗:๔-๗
[๔] ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ: I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II[๕] ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II[๖] ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II[๗] ಪ್ರಭೂ, ನಿನಗೆ ಮೊರೆಯಿಡುವೆನು I ಕರುಣಿಸೆನಗೆ ಸದುತ್ತರವನು II

ಕೀರ್ತನೆಗಳು ೯೦:೧೨
ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II

ಕೀರ್ತನೆಗಳು ೯೧:೧೧
ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II

ಕೀರ್ತನೆಗಳು ๙๑:๑๖
ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II

ಕೀರ್ತನೆಗಳು ೧೧೮:೨೪
ಪ್ರಭುವೇ ನಿಯೋಜಿಸಿದ ದಿನವಿದು I ಹರ್ಷಿಸಿ ಆನಂದಿಸೋಣ ಇಂದು II

ಜೆಫನ್ಯನ ๓:๑๗
ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.

ಕೀರ್ತನೆಗಳು ೩೭:೪-೫
[೪] ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II[೫] ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II

ಪ್ರಲಾಪಗಳು ๓:๒๒-๒๓
[๒๒] ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.[๒๓] ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.

ಸಂಖ್ಯಾಕಾಂಡ ೬:೨೪-೨೬
[೨೪] ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ![೨೫] ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ![೨೬] ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!

ಕೀರ್ತನೆಗಳು ๑๓๙:๑-๒๔
[๑] ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II[๒] ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II[๓] ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II[๔] ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II[๕] ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II[๖] ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II[๗] ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II[๘] ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II[๙] ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II[๑๐] ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II[๑๑] “ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II[๑๒] ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II[๑๓] ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II[๑๔] ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II[๑๕] ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II[๑๖] ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II[๑๗] ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II[๑๘] ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II[๑๙] ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II[๒๐] ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II[๒๑] ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II[๒๒] ಹಗೆಮಾಡುವೆನವರನು ಸಂಪೂರ್ಣವಾಗಿ I ಭಾವಿಸುವೆನವರನು ನನ್ನ ವೈರಿಗಳನ್ನಾಗಿ II[๒๓] ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II[๒๔] ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II

Kannada Bible (KNCL) 2016
No Data