A A A A A

ಪಾಪಗಳು: [ಚಟ]


ಕೊರಿಂಥಿಯರಿಗೆ ೧ 10:13-14
[13] ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.[14] ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.

ಯೊವಾನ್ನನು ೧ 2:16
ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.

ಕೊರಿಂಥಿಯರಿಗೆ ೧ 15:33
ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”

ಯಕೋಬನು 4:7
ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.

ಕೊರಿಂಥಿಯರಿಗೆ ೧ 6:12
“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.

ಪೇತ್ರನು ೧ 5:10
ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.

ಕೀರ್ತನೆಗಳು 50:15
ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II

ರೋಮನರಿಗೆ 5:3-5
[3] ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,[4] ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.[5] ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.

ಕೊರಿಂಥಿಯರಿಗೆ ೧ 6:9-11
[9] ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,[10] ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.[11] ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.

ತೀತನಿಗೆ 2:12
ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.

ಯಕೋಬನು ೧:೨-೩
[೨] ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.[೩] ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ.

ಹಿಬ್ರಿಯರಿಗೆ ೪:೧೫-೧೬
[೧೫] ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.[೧೬] ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.

ಯೊವಾನ್ನನು ೩:೧೬-೧೭
[೧೬] ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.[೧೭] ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.

ಫಿಲಿಪಿಯರಿಗೆ ೪:೧೩
ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.

ಕೀರ್ತನೆಗಳು ೯೫:೮
ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II

ಮತ್ತಾಯನು ೬:೧೩
ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’

ಮತ್ತಾಯನು ೨೬:೪೧
ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.

Kannada Bible (KNCL) 2016
No Data